ನವದೆಹಲಿ: ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವ ಮೂಲಕ ಮಹಿಳಾ ದಿನಾಚರಣೆಯಂದು ಮಹಿಳೆಯಲರಿಗೆ ಪ್ರಧಾನಿ ನರೇಂದ್ರ ಮೋದಿಯವರು ಉಡುಗೊರೆಯನ್ನು ನೀಡಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪ್ರಧಾನಿ ಮೋದಿಯವರು ಈ ಘೋಷಣೆಯನ್ನು ಮಾಡಿದ್ದಾರೆ. ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರು. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ.
Advertisement. Scroll to continue reading.
ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜೊತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ.
In this article:Diksoochi news, Featured, gas, LPG, modi, Women's day, ಎಲ್ಪಿಜಿ, ಬೆಲೆ ಇಳಿಕೆ
Click to comment