Connect with us

Hi, what are you looking for?

Diksoochi News

ರಾಜ್ಯ

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ: ದ.ಕ.ಗೆ ಬ್ರಿಜೇಶ್ ಚೌಟ, ಉಡುಪಿಗೆ ಕೋಟ ಅಭ್ಯರ್ಥಿ

0

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ 20 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡಲಾಗಿದೆ.

ನಿರೀಕ್ಷೆಯಂತೆ ಮೈಸೂರಿನಿಂದ ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌ ಆಗಿದೆ. ಬಿಜೆಪಿಯ ಒಟ್ಟು 8 ಹಾಲಿ ಸದಸ್ಯರಿಗೆ ಈ ಬಾರಿ ಟಿಕೆಟ್‌ ತಪ್ಪಿದೆ. ಪ್ರತಾಪ್‌ ಸಿಂಹ, ಡಿವಿ ಸದಾನಂದ ಗೌಡ, ಕರಡಿ ಸಂಗಣ್ಣ, ಶಿವಕುಮಾರ್‌ ಉದಾಸಿ, ಜಿಎಸ್‌ ಬಸವರಾಜು ಅವರಿಗೆ ಟಿಕೆಟ್‌ ತಪ್ಪಿದೆ.  ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ.  ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್‌ಗಳ ಕ್ಷೇತ್ರವನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಪ್ರಮುಖವಾಗಿ ತುಮಕೂರು ಕ್ಷೇತ್ರದಿಂದ ವಿ. ಸೋಮಣ್ಣ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 2ನೇ ಪಟ್ಟಿಯಲ್ಲಿ ಲೋಕಸಭೆಗೆ ಒಟ್ಟು 72 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ. 

ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ

Advertisement. Scroll to continue reading.

ಬಿಜಾಪುರ- ರಮೇಶ್ ಜಿಗಜಿಣಗಿ

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!