ನವದೆಹಲಿ: ಪೇಟಿಎಂ ಫಾಸ್ಟ್‌ಟ್ಯಾಗ್ ಬಳಕೆದಾರರು ಮಾರ್ಚ್ 15 ರೊಳಗೆ ಇತರೆ ಬ್ಯಾಂಕ್‌ಗಳ ಪಾಸ್ಟ್‌ಟ್ಯಾಗ್‌ಗೆಗ ಬದಲಾಯಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಲಹೆಯನ್ನು ನೀಡಿದೆ. ತಡೆರಹಿತ ಪ್ರಯಾಣಕ್ಕೆ ಮತ್ತು ಟೋಲ್ ಪ್ಲಾಜಾಗಳಲ್ಲಿ ಅನಾನುಕೂಲತೆಯನ್ನು ತಪ್ಪಿಸಲು ಫಾಸ್ಟ್ ಟ್ಯಾಗ್ ಬದಲಿಸಲು ಮನವಿ ಮಾಡಿದೆ.
ಪೇಟಿಎಂ ಬ್ಯಾಕಿಂಗ್ ವ್ಯವಸ್ಥೆಗೆ ಆರ್‌ಬಿಐ ತಡೆ ನೀಡಿರುವ ಹಿನ್ನೆಲೆ ಪೇಟಿಎಂ ಪಾಸ್ಟ್‌ಟ್ಯಾಗ್ ಬಳಕೆದಾರರಿಗೆ ಮಾರ್ಚ್ 15 ನಂತರ ಬ್ಯಾಲೆನ್ಸ್ ರೀಚಾರ್ಜ್ ಮಾಡಲು ಅಥವಾ ಟಾಪ್-ಅಪ್ ಮಾಡಲು ಸಾಧ್ಯವಾಗುವುದಿಲ್ಲ. ಆದಾಗ್ಯೂ ಅಸ್ತಿತ್ವದಲ್ಲಿರುವ ಬ್ಯಾಲೆನ್ಸ್ ಬಳಸಬಹುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿದೆ.
ಪೇಟಿಎಂ ಫಾಸ್ಟ್‌ಟ್ಯಾಗ್ ಗೆ ಸಂಬಂಧಿಸಿದ ಯಾವುದೇ ಹೆಚ್ಚಿನ ಪ್ರಶ್ನೆಗಳು ಅಥವಾ ಸಹಾಯಕ್ಕಾಗಿ, ಬಳಕೆದಾರರು ತಮ್ಮ ಬ್ಯಾಂಕ್‌ಗಳನ್ನು ಸಂಪರ್ಕಿಸಬಹುದು ಅಥವಾ IHMCL ವೆಬ್‌ಸೈಟ್‌ನಲ್ಲಿ ಒದಗಿಸಲಾದ FAQ ಗಳನ್ನು ಉಲ್ಲೇಖಿಸಬಹುದು. ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಪ್ರಯಾಣದ ಅನುಭವವನ್ನು ಖಚಿತಪಡಿಸಿಕೊಳ್ಳಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ NHAI ಎಲ್ಲಾ ಪೇಟಿಎಂ ಫಾಸ್ಟ್‌ಟ್ಯಾಗ್ ಬಳಕೆದಾರರಿಗೆ ಸೂಚಿಸಿದೆ.