Connect with us

Hi, what are you looking for?

Diksoochi News

ರಾಷ್ಟ್ರೀಯ

ಹಣೆಗೆ ಗಾಯ: ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್

0

ಕೋಲ್ಕತ್ತಾ: ಮನೆಯಲ್ಲೇ ಬಿದ್ದು ಹಣೆ ಹಾಗೂ ಮೂಗಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ತಡರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ.

ಗುರುವಾರ ಕಾರ್ಯಕ್ರಮವೊಂದಕ್ಕೆ ತೆರಳಿ ಬಳಿಕ ಮನೆಗೆ ಬಂದ ವೇಳೆ ಅಚಾನಕ್ ಆಗಿ ಬಿದ್ದಿದ್ದರು ಈ ವೇಳೆ ಅವರ ಹಣೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿತ್ತು ಕೂಡಲೇ ಅವರನ್ನು ಸರಕಾರಿ ಸ್ವಾಮ್ಯದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು ಇಲ್ಲಿ ಪರೀಕ್ಷೆ ನಡೆಸಿದ ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂದೋಪಾಧ್ಯಾಯ ಹಣೆಗೆ ಗಾಯವಾದ ನಿಟ್ಟಿನಲ್ಲಿ ಹೊಲಿಗೆ ಹಾಕಿದ್ದಾರೆ ಅಲ್ಲದೆ ಬಿದ್ದ ವೇಳೆ ಮೂಗಿಗೂ ಪೆಟ್ಟು ಬಿದ್ದುದರಿಂದ ಮೂಗಿಗೂ ಹೊಲಿಗೆ ಹಾಕಿ, ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ತಡರಾತ್ರಿ ಮನೆಗೆ ಕಳುಹಿಸಿಕೊಡಲಾಯಿತು ಎಂದು ಆಸ್ಪತ್ರೆಯ ನಿರ್ದೇಶಕ ಮಾಹಿತಿ ನೀಡಿದ್ದಾರೆ.

ಹಣೆಗೆ ಪೆಟ್ಟಾಗಿರುವ ಕಾರಣ ಅವರು ತೀವ್ರ ನಿಗಾದಲ್ಲಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ವೇಳೆ ಅವರ ಜೊತೆಗೆ ಆಕೆಯ ಸೋದರಳಿಯ ಮತ್ತು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಜೊತೆಗಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!