ಬ್ರಹ್ಮಾವರ : ಉಡುಪಿ ಜಿಲ್ಲಾಡಳಿತ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಭಾರತೀಯ ಕಯಾಕಿಂಗ್ ಮತ್ತು ಕನುಯಂಗ್ ಅಶೋಶಿಯೇಶನ್ ಕರ್ನಾಟಕ ಇವರ ವತಿಯಿಂದ11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್‌ಗೆ ಇಂದು ಹೇರೂರು ಸ್ವರ್ಣ ನದಿ ಬಳಿಯಲ್ಲಿ ಗಣ್ಯರೊಂದಿಗೆ ಉಡುಪಿ ಶಾಸಕ ಕೆ ರಘುಪತಿ ಭಟ್ ಚಾಲನೆ ನೀಡಿದರು.
ಈ ಸಂದರ್ಭ ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಎಚ್. ಎಸ್ ಬಲ್ಲಾಳ್, ಭಾರತೀಯ ಕಯಾಕಿಂಗ್ ಮತ್ತು ಕನೂಯಿಂಗ್ ಅಸೋಸಿಯೇಷನ್ ಅಧ್ಯಕ್ಷ ಪ್ರಶಾಂತ್ ಕುಶ್ವಾಹಾ, ಮತ್ತು ಕರ್ನಾಟಕದ ಮೇಜರ್ ಜನರಲ್ ಎಂ.ಎನ್ ದೇವಯ್ಯ, ಕಾರ್ಯದರ್ಶಿ ದಿಲೀಪ್ ಕುಮಾರ್, ಭಾರತೀಯ ಡ್ರ್ಯಾಗನ್ ಬೋಟ್ ತಂಡದ ನಾಯಕ ಮಂಜೀತ್ ಸಿಂಗ್, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಗ್ರಾಮ ಪಂಚಾಯತ್ ಅಧ್ಯಕ್ಷರುಗಳಾದ ಮಹೇಶ್ ಕೋಟ್ಯಾನ್, ಬೇಬಿ, ಪ್ರಭಾಕರ್ ಶೆಟ್ಟಿ, ಪಂದ್ಯಾವಳಿಯ ಸ್ವಾಗತ ಸಮಿತಿಯ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೋಷನ್ ಶೆಟ್ಟಿ ಇನ್ನಿತರು ಉಪಸ್ಥಿತರಿದ್ದರು.
ಇಂದಿನಿಂದ ಹಿರಿಯರ ಮತ್ತು ಕಿರಿಯರ 2 ವಿಭಾಗದಲ್ಲಿ ಪುರುಷರ ಮತ್ತು ಮಹಿಳೆಯರ ಮಿಶ್ರ ತಂಡವಾಗಿ 3 ದಿನಗಳ ಕಾಲ ನಡೆಯಲಿದೆ .
