Connect with us

Hi, what are you looking for?

Diksoochi News

ರಾಜ್ಯ

ಸಿಟಿ ರವಿಗಾದ ಅನ್ಯಾಯ ಸರಿಪಡಿಸಲು ಪ್ರಯತ್ನಿಸುವೆ: ಯಡಿಯೂರಪ್ಪ

0

ಚಿಕ್ಕಮಗಳೂರು: ಪಕ್ಷದ ಮುಖಂಡ ಸಿಟಿ ರವಿ ಅವರಿಗೆ ಅನ್ಯಾಯವಾಗಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಟಿ ರವಿ ಅವರು ವಿಧಾನಸಭೆಯಲ್ಲಿ ಇರಬೇಕಿತ್ತು. ವಿಧಾನಸಭೆ ಅಥವಾ ವಿಧಾನಪರಿಷತ್ತಿನಲ್ಲಿ ಸಿಟಿ ರವಿ ಅವರಿಗೆ ಅವಕಾಶ ನೀಡುವ ಮೂಲಕ ಅನ್ಯಾಯ ಸರಿಪಡಿಸಲು ನಾನು ಎಲ್ಲ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಸಿಟಿ ರವಿ, ಪಕ್ಷದ ಮುಖಂಡರ ಹೆಸರಿನಲ್ಲಿ ನನ್ನ ವಿರುದ್ಧ ಸುಳ್ಳು ಪ್ರಚಾರ ಕೈಗೊಂಡಿದ್ದರಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದೇನೆ. 4 ಬಾರಿ ಶಾಸಕನಾಗಿದ್ದಾಗ ಹೆಚ್ಚು ಕೆಲಸ ಮಾಡಿದ್ದೆ. ಆದರೂ, ಈ ಬಾರಿ ಚುನಾವಣೆಯಲ್ಲಿ ಸೋತೆ. ಚುನಾವಣೆ ಸಂದರ್ಭದಲ್ಲಿ ಕೆಲಸಗಳ ಕುರಿತು ಚರ್ಚೆ ಆಗಲಿಲ್ಲ, ಅಪಪ್ರಚಾರವಾಯಿತು ಎಂದರು.

Advertisement. Scroll to continue reading.

ನನ್ನ ಹಣೆ ಬರಹ ಕೆಟ್ಟಿತ್ತು. ಜೆಡಿಎಸ್ ಕೂಡ ನನ್ನ ವಿರುದ್ಧವಾಗಿಯೇ ಕೆಲಸ ಮಾಡಿತ್ತು. ಜೆಡಿಎಸ್ ಅಭ್ಯರ್ಥಿ ಇದ್ದರೂ ನನ್ನ ವಿರುದ್ಧ ಕೆಲಸ ಮಾಡಲಾಯಿತು. ನಮ್ಮ ನಾಯಕರ ಹೆಸರನ್ನೂ ಬಳಸಿಕೊಂಡು ನನ್ನ ಬಗ್ಗೆ ಅಪಪ್ರಚಾರ ಮಾಡಿದರು ಎಂದು ಹೇಳಿದರು.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಲಕ್ನೋ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಕ್ಷೇತ್ರದ ಅಭ್ಯರ್ಥಿ ರಾಹುಲ್‌ ಗಾಂಧಿ ಭೇಟಿ ಬಳಿಕ ಕ್ಷೌರದ ಅಂಗಡಿಯ ಲಕ್‌ ಬದಲಾಗಿದೆ. ರಾಜಕೀಯ ಜನಪ್ರಿಯ ನಾಯಕನ ಭೇಟಿ ನಂತರ ಅಂಗಡಿಗೆ ಭೇಟಿ...

ಕರಾವಳಿ

0 ಉಡುಪಿ: ಗಾಂಧಿಯನ್ ಸೆಂಟರ್ ಫಾರ್ ಫಿಲೋಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡಕ ಸಹಯೋಗದಲ್ಲಿ ಮೇ 18ರಂದು ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಂಬ ಬಗ್ಗೆ ವಿಚಾರ...

ರಾಜ್ಯ

0 ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು...

ಅರೆ ಹೌದಾ!

0 ತಿರುವನಂತಪುರಂ: ಆರು ಬೆರಳುಗಳಿರುವ ಮಗುವನ್ನು ಶಸ್ತ್ರಚಿಕಿತ್ಸೆಗೆಂದು ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿ ವೈದ್ಯರು ಎಡವಟ್ಟು ಮಾಡಿರುವ ಪ್ರಕರಣವೊಂದು ಕೇರಳದ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ...

ರಾಜ್ಯ

0 ಬೆಂಗಳೂರು: ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಪ್ರತಿಪಕ್ಷಗಳು ಮತ್ತು ಸ್ವಪಕ್ಷದ  ನಾಯಕರು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ನಡುವೆ, ಹುಬ್ಬಳ್ಳಿ ಅಂಜಲಿ ಅಂಬಿಗೇರ (20) ಹತ್ಯೆ  ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ ಎಂದು...

error: Content is protected !!