ಶಿವಮೊಗ್ಗ : ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಬಿ.ಎಸ್ ಯಡಿಯೂರಪ್ಪ ಹುಟ್ಟಿದ ದಿನವಾದ ನಾಳೆ ವಿಮಾನ ನಿಲ್ದಾಣಕ್ಕೆ ಮೋದಿ ಅವರು ಚಾಲನೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ನೇರವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ನಾಳೆ ಮೋದಿ ದೆಹಲಿಯಿಂದ ಬೆಳಗ್ಗೆ 11.15ಕ್ಕೆ ಶಿವಮೊಗ್ಗ ಏರ್ ಪೋರ್ಟ್ ಗೆ ಆಗಮಿಸಲಿದ್ದಾರೆ. ವಿಮಾನ ಇಳಿದ ಬಳಿಕ ನೂತನ ಏರ್ ಪೊರ್ಟ್ ಟರ್ಮಿನಲ್ ವೀಕ್ಷಿಸಲಿದ್ದಾರೆ.

ನಂತರ ಏರ್ ಪೊರ್ಟ್ ಆವರಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಸಾವಿರಾರು ಕೋಟಿ ಕೇಂದ್ರ ಅನುದಾನದ ವಿವಿಧ ಕಾಮಗಾರಿಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ಮೋದಿ ಶಿವಮೊಗ್ಗ ಏರ್ಪೋರ್ಟ್‌ನಿಂದ ಬೆಳಗಾವಿಯತ್ತ ಪಯಾಣ ಬೆಳೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಹಲವು ಕೇಂದ್ರ ಮತ್ತು ರಾಜ್ಯ ಸಚಿವರು ಭಾಗಿಯಾಗಲಿದ್ದಾರೆ.

