ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಘಟನೆ ನಗರದ ಹೆಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗಿರಿಜಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ನವೀನ್ ಹತ್ಯೆಗೈದ ಆರೋಪಿಯಾಗಿದ್ದಾನೆ. ಪತಿ ಹಾಗೂ ಪತ್ನಿಯ ನಡುವೆ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಮಹಿಳೆ ಮಲಗಿದ್ದ ವೇಳೆ ಆರೋಪಿ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.
ಗಿರಿಜಾ ಮತ್ತು ನವೀನ್, ಕಳೆದ 8 ತಿಂಗಳ ಹಿಂದಷ್ಟೇ ಮದುವೆ ಆಗಿದ್ದರು. ಆರೋಪಿ ನವೀನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
Advertisement. Scroll to continue reading.
ಈ ಸಂಬಂಧ ಹೆಚ್‍ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ
Advertisement. Scroll to continue reading.