Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಸಂಗಾತಿ ಜೊತೆಗೆ ಸ್ನಾನ ಮಾಡಿ ನೀರು ಉಳಿಸಿ: ಮೇಯರ್‌ ಸಲಹೆ

0

ಬೊಗೋಟಾ: ಈ ಬಾರಿ ಬೇಸಿಗೆಗೆ ಸಿಲಿಕಾನ್‌ ಸಿಟಿ ಬೆಂಗಳೂರು ಮಾತ್ರವಲ್ಲ ವಿಶ್ವದ ವಿವಿಧೆಡೆ ಮಹಾನಗರಗಳೂ ತೀವ್ರ ನೀರಿನ ಕೊರತೆ ಎದುರಿಸುತ್ತಿವೆ.

ಅದರಲ್ಲೂ ದಕ್ಷಿಣ ಅಮೆರಿಕದ ಬೊಗೋಟಾ ನಗರವಂತೂ ಗಂಭೀರ ಸ್ಥಿತಿಯಲ್ಲಿದೆ. ಜನರಿಗೆ ಆಶಾಕಿರಣದಂತಿದ್ದ ಜಲಾಶಯಗಳೇ ಬತ್ತಿಹೋಗುತ್ತಿವೆ. ಹಾಗಾಗಿ, ನೀರು ಮಿತವ್ಯಯಕ್ಕೆ ಅಲ್ಲಿನ ಮೇಯರ್, ಜನರಿಗೆ ವಿಚಿತ್ರ ಸಲಹೆಯೊಂದನ್ನ ನೀಡಿದ್ದಾರೆ. ಜನ ತಮ್ಮ ಸಂಗಾತಿಯೊಂದಿಗೆ ಒಟ್ಟಿಗೆ ಸ್ನಾನ ಮಾಡುವ ಮೂಲಕ ನೀರು ಉಳಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇತ್ತೀಚೆಗೆ ನಗರದ ಪ್ರಮುಖ ಪ್ರದೇಶಗಳಲ್ಲಿ ನೀರು ಪೂರೈಕೆ ತಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಬೊಗೋಟಾ ಮೇಯ‌ರ್ ಕಾರ್ಲೋಸ್ ಫರ್ನಾಂಡೊ ಗ್ಯಾಲನ್ ಅವರು, ಸಂಗಾತಿಯಾದವರು ಜೋಡಿಯಾಗಿ ಸ್ನಾನ ಮಾಡುವ ಮೂಲಕ ನೀರು ಮಿತವ್ಯಯ ಬಳಕೆಯ ಅಭ್ಯಾಸ ಮಾಡಿಕೊಳ್ಳಬೇಕು. ಈ ರೀತಿಯಾಗಿ ಮಾಡುವುದರಿಂದ ಸಾಕಷ್ಟು ಸಹಾಯಕವಾಗಲಿದೆ ಎಂದು ಅವರು ಹೇಳಿದ್ದಾರೆ.

Advertisement. Scroll to continue reading.

ಜೋಡಿಯಾಗಿ ಸ್ನಾನ ಮಾಡಿ ಎಂದು ಕರೆ ನೀಡಿರುವ ಮೇಯರ್, ಒಂದು ವೇಳೆ ರಜಾ ದಿನಗಳಲ್ಲಿ ಮನೆಯಲ್ಲೇ ಇರುವುದಾದರೆ ಅಂದು ಸ್ನಾನ ಮಾಡಬೇಡಿ ಎಂದೂ ಕರೆ ಕೊಟ್ಟಿದ್ದಾರೆ.

1980ರ ಬಳಿಕ ಬೊಗೋಟಾ ನಗರದಲ್ಲಿ ಅಪಾರ ಪ್ರಮಾಣದ ಜಲಕ್ಷಾಮ ಎದುರಾಗುತ್ತಿದೆ. ಜಲಾಶಯದ ಮಟ್ಟ ಸಹಜ ಪ್ರಮಾಣಕ್ಕಿಂತ 17 ಪ್ರತಿಶತದಷ್ಟು ಕಡಿಮೆಯಾಗಿದೆ. ಹಾಗಾಗಿ ನೀರಿನ ಮಿತ ಬಳಕೆಗೆ ಜನರು ಮುಂದಾಗಬೇಕು. ಜನರಿಗೆ ಕುಡಿಯುವ ನೀರನ್ನು ಪೂರೈಸಲು ಬೇಕಾಗ ಅಗತ್ಯ ಕ್ರಮಗಳನ್ನು ನಾವು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

0 ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ   ದೂರು ನೀಡಿದ್ದ  ಮಹಿಳೆ ಮೃತಪಟ್ಟಿದ್ದಾರೆ. 17 ವರ್ಷದ ತಮ್ಮ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಬೆಂಗಳೂರಿನ...

error: Content is protected !!