Connect with us

Hi, what are you looking for?

Diksoochi News

ಸಿನಿಮಾ

ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ  ದ್ವಾರಕೀಶ್ ಇನ್ನಿಲ್ಲ

0

ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು.

ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ.  ನಿರ್ದೇಶಕ, ನಿರ್ಮಾಪಕ, ನಟರಾಗಿ ಕನ್ನಡ ಚಿತ್ರರಂಗದಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ.

ಆರಂಭಿಕ ಜೀವನ :

Advertisement. Scroll to continue reading.

ದ್ವಾರಕೀಶ್ ಆಗಸ್ಟ್ 19, 1942 ಹುಣಸೂರಿನಲ್ಲಿ ಶಮಾರಾವ್ ಮತ್ತು ಜಯಮ್ಮ ದಂಪತಿಗೆ ಜನಿಸಿದ್ದರು. ಮೈಸೂರಿನ ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ ಸಿಪಿಸಿ ಪಾಲಿಟೆಕ್ನಿಕ್‌ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮಾಡಿದರು.

ಬಳಿಕ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದ್ದ ದ್ವಾರಕೀಶ್‌ 1963 ರಲ್ಲಿ  ವ್ಯಾಪಾರ ಬಿಟ್ಟು ಸಿನಿಮಾದತ್ತ ಹೊರಳಿದರು.

ಸಿನಿಪಯಣ:

ವಿಷ್ಣುವರ್ಧನ್‌, ಡಾ ರಾಜ್‌ಕುಮಾರ್‌, ಅಂಬರೀಶ್ ರಂತಹ ಮೇರು ನಟರ ಜೊತೆ ದ್ವಾರಕೀಶ್‌ ನಟಿಸಿದ್ದಾರೆ. ನಿರ್ದೇಶಕ ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದಾರೆ. ವಿಷ್ಣುದಾದ – ದ್ವಾರಕೀಶ್ ಜೋಡಿ ಜನಪ್ರಿಯವಾಗಿತ್ತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!