Connect with us

Hi, what are you looking for?

Diksoochi News

ರಾಜ್ಯ

ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾವು; ತಾಯಿ ಅಸ್ವಸ್ಥ

0

ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್ ಮತ್ತು ತ್ರಿಶಾ ಮೃತಪಟ್ಟ ಮಕ್ಕಳು. ಇವರ ಜೊತೆ ಐಸ್ ಕ್ರೀಂ ತಿಂದಿದ್ದ ತಾಯಿ ಪೂಜಾ ಕೂಡ ಅಸ್ವಸ್ಥಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬುಧವಾರ ಸಂಜೆ ವಾಹನದಲ್ಲಿ ಬೆಟ್ಟಹಳ್ಳಿಗೆ ತಂದಿದ್ದ ಐಸ್ ಕ್ರೀಂ ಖರೀದಿಸಿ ತಿಂದ ಕೆಲ ಹೊತ್ತಿನ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದರು ಎಂದು ಹೇಳಲಾಗಿದೆ. ಅಸ್ವಸ್ಥಗೊಂಡಿದ್ದ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisement. Scroll to continue reading.

ಇದೇ ವಾಹನದಲ್ಲಿ ಗ್ರಾಮದ ಇನ್ನೂ ಹಲವರು ಐಸ್‌ಕ್ರೀಂ ಖರೀದಿಸಿ ಸೇವಿಸಿದ್ದರು. ಬೇರೆಯವರಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿಲ್ಲ ಎನ್ನಲಾಗಿದೆ. ಮಕ್ಕಳ ಸಾವು ಪ್ರಕರಣ ಅನುಮಾನಾಸ್ಪವಾಗಿದ್ದು, ಈ ಬಗ್ಗೆ ತನಿಖೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

0 ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ   ದೂರು ನೀಡಿದ್ದ  ಮಹಿಳೆ ಮೃತಪಟ್ಟಿದ್ದಾರೆ. 17 ವರ್ಷದ ತಮ್ಮ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಬೆಂಗಳೂರಿನ...

error: Content is protected !!