ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.
ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ.
ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ ಫಯಾಜ್ ಎಂಬಾತ ನೇಹಾಳಿಗೆ 9 ಬಾರಿ ಚಾಕುವಿನಿಂದ ಇರಿದಿದ್ದಾನೆ.
ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.
Advertisement. Scroll to continue reading.
ಆಕೆ ಆತನ ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಫಯಾಜ್ ನನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯಕ್ಕೆ ಕಾರಣ ತನಿಖೆಯಿಂದ ತಿಳಿದುಬರಲಿದೆ.
Advertisement. Scroll to continue reading.