Connect with us

Hi, what are you looking for?

Diksoochi News

ರಾಜ್ಯ

ಬಿಜೆಪಿಯಿಂದ ಕೆ.ಎಸ್‌.ಈಶ್ವರಪ್ಪ ಉಚ್ಛಾಟನೆ

0

ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್‌ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ಇಂದು(ಏ.22) ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

Advertisement. Scroll to continue reading.


ಹೀಗಾಗಿ ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.

ಶಿವಮೊಗ್ಗ ಜಿಲ್ಲೆಯಲ್ಲಿ ಮೇ 7ರಂದು ಚುನಾವಣೆ ನಡೆಯಲಿದ್ದು, ಕೆ.ಎಸ್.ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ಟೋಕಿಯೋ: ಕಾಲ ಆಧುನಿಕವಾಗುತ್ತಿದ್ದಂತೆ ಯುವಜನತೆಯ ಯೋಚನೆಯಲ್ಲೂ ಬಹು ಬದಾಲಾವಣೆ ಉಂಟಾಗುತ್ತಿದೆ. ಜತೆಗೆ ಕೌಟುಂಬಿಕ ಜೀವನ ಪದ್ಧತಿಯೂ ಬದಲಾಗುತ್ತಿದೆ. ಹಿಂದೆಲ್ಲ ಕುಟುಂಬ, ಮದುವೆ ಜೀವನದ ಅವಿಭಾಜ್ಯ ಅಂಗವಾಗಿತ್ತು. ಬಳಿಕ ಮದುವೆಯ ಸಾಂಪ್ರದಾಯಿಕ ವ್ಯವಸ್ಥೆಯನ್ನು...

ರಾಷ್ಟ್ರೀಯ

0 ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿ ಆಂತರಿಕ ಭಿನ್ನಮತದ ಬೇಗೆಯನ್ನು ಎದುರಿಸುತ್ತಿದೆ. ಸಹಕಾರ ಕ್ಷೇತ್ರದಲ್ಲಿ ಐಎಫ್ಎಫ್ ಸಿಒ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಭಿನ್ನಮತ ಸ್ಪಷ್ಟವಾಗಿ...

ರಾಜ್ಯ

1 ಮಡಿಕೇರಿ: ಬಾಲಕಿಯ ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ...

ರಾಜ್ಯ

0 ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಎಸ್‌.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು...

ಜ್ಯೋತಿಷ್ಯ

0 ದಿನಾಂಕ : ೧೨-೦೫-೨೪, ವಾರ : ಭಾನುವಾರ ಹಣದ ಖರ್ಚು ಹೆಚ್ಚಿರಲಿದೆ. ಇದರಿಂದ ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಹಣದ ವಿಚಾರಕ್ಕೆ ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ....

error: Content is protected !!