ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಯುವಕನೊಬ್ಬ ಕುಸಿದು ಬಿದ್ದು ಹೃದಯಾಘಾತಗೊಂಡು ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದೆ. ಈ ವಿಡಿಯೋ ವೈರಲ್ ಆಗಿದೆ.
ಸಿಕಂದರಾಬಾದ್‌ನ ಲಾಲಾಪೇಟ್‌ನ ಪ್ರೊಫೆಸರ್ ಜಯಶಂಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಬ್ಯಾಡ್ಮಿಂಟನ್ ಆಡುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತನನ್ನು ಮಲ್ಕಾಜ್‌ಗಿರಿ ಮೂಲದ ಪರಮೇಶ್ ಯಾದವ್ ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ಯಾದವ್ ತಮ್ಮ ಕಚೇರಿಯಿಂದ ಹಿಂದಿರುಗಿದ ನಂತರ ನಿಯಮಿತವಾಗಿ ಬ್ಯಾಡ್ಮಿಂಟನ್ ಆಡುತ್ತಿದ್ದರು. ನಿನ್ನೆ ಕೂಡ ಅವರು ತಮ್ಮ ದಿನಚರಿಯಂತೆ ಕ್ರೀಡಾಂಗಣಕ್ಕೆ ಹೋಗಿದ್ದರು. ಮಂಗಳವಾರ ಸಂಜೆ 7.30 ರ ಸುಮಾರಿಗೆ ಈ ಘಟನೆ ನಡೆದಿದೆ. ಅವರನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ
Another #HeartAttack,
A 38 yr old Shyam collapsed while playing badminton, in #Hyderabad.
In visuals people take turns to check if he is breathing, If life-saving #CPR had been administered early, he would have probably been alive.
Need awareness on CPR for all.#cardiacarrest pic.twitter.com/EyQD27xoPe— Surya Reddy (@jsuryareddy) March 1, 2023
