ಕಲಬುರಗಿ : ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಹೊರ ಹೊಲಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿದೆ.
ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡುತ್ತಿದ್ದಾಗ ಹೆಲಿಕಾಪ್ಟರ್ ಸುತ್ತ ಜಮೀನಿನನಲ್ಲಿ ಹಾಕಲಾಗಿರುವ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ.
ಈ ವೇಳೆ ಸ್ಥಳದಲ್ಲಿ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್‌ನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಆಕಾಶದಲ್ಲಿ ಹಾರಾಟ ಮಾಡಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಬಳಿಕ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದರು. ನಂತರ ಪೈಲೆಟ್ ಲ್ಯಾಂಡ್ ಮಾಡಿದ್ದಾರೆ ಎಂದು ವರದಿಯಾಗಿದೆ.
Advertisement. Scroll to continue reading.

In this article:CM Yadiyurappa, Diksoochi news, diksoochi Tv, diksoochi udupi, haveri, helicopter landing, jevargi

Click to comment