ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕುರಿತು ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ನೀಡಿದೆ.
ಹೈಕೋರ್ಟ್ ಏಕಸದಸ್ಯಪೀಠ ವಿಚಾರಣೆ ನಡೆಸಿದ್ದು, ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಮಾಡಾಳ್ ವಿರೂಪಾಕ್ಷಪ್ಪನವರ ಪರ ಹಿರಿಯ ವಕೀಲ ಕೆ. ಸುಮನ್ ವಾದ ಮಂಡಿಸಿದ್ದು, ವಿರೂಪಾಕ್ಷಪ್ಪ ವಿರುದ್ಧ ಎಫ್ ಐಆರ್ ನಲ್ಲಿ ಯಾವುದೇ ಆರೋಪಗಳಿಲ್ಲ, ಲೋಕಾಯುಕ್ತ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ.

ಟೆಂಡರ್ ಹಾಗೂ ಖರೀದಿ ಆದೇಶ ನೀಡಲಾಗಿದೆ. ಟೆಂಡರ್ ಅಂತಿಮಗೊಳಿಸುವ ಅಧಿಕಾರ ವಿರೂಪಾಕ್ಷಪ್ಪನವರದ್ದಲ್ಲ. ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ. ಮಗನೊಂದಿಗೆ ಮಾತನಾಡುವಂತೆ ತಿಳಿಸಿರುವುದಾಗಿ ಆರೋಪಿಸಲಾಗಿದೆ. ಒಂದೂ ರೂಪಾಯಿ ಪಡೆಯದೇ ಟೆಂಡರ್ ನೀಡಲಾಗಿದೆ. Bwwಯಲ್ಲಿ ಕೆಲಸ ಮಾಡುವ ಮಗನಿಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ಹೇಳಿದ್ದಾರೆ.
ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯಪೀಠ 5 ಲಕ್ಷ ಬಾಂಡ್ ಇಟ್ಟು, ಇಬ್ಬರು ಶ್ಯೂರಿಟಿ ಮಾಡಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ 48 ಗಂಟೆಗಳಲ್ಲಿ ಪೊಲೀಸರಿಗೆ ಶರಣಾಗುವಂತೆ ಹೇಳಿದೆ.
ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದ್ದು, ಶಾಸಕ ವಿರೂಪಾಕ್ಷಪ್ಪ, ಅವರ ಪುತ್ರ ಸೇರಿದಂತೆ ಐದು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಇಂದು ವಿಚಾರಣೆ ನಡೆಸಿ ತೀರ್ಪು ನೀಡಿದ ಹೈಕೋರ್ಟ್ ನ ಏಕಸದಸ್ಯ ಪೀಠ ಶಾಸಕರಿಗೆ ಮಧ್ಯಂತರ ಜಾಮೀನು ನೀಡಿ 48 ಗಂಟೆಗಳೊಳಗೆ ಶರಣಾಗುವಂತೆ ಆದೇಶ ನೀಡಿದೆ. ಲೋಕಾಯುಕ್ತ ಪೊಲೀಸರು ಸೂಕ್ತ ದಾಖಲೆ ಸಲ್ಲಿಸುವವರೆಗೆ ಶಾಸಕರಿಗೆ ಜಾಮೀನು ಸಿಕ್ಕಿದೆ.

ಬಂಧನ ಭೀತಿಯಲ್ಲಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಳೆದ 6 ದಿನಗಳಿಂದ ತಲೆಮರೆಸಿಕೊಂಡಿದ್ದರು.
