ಬೆಂಗಳೂರು : 2022-23ನೇ ಸಾಲಿನ ಅಯವ್ಯಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟವನ್ನು ಉತ್ತಮಪಡಿಸಲುವ ನಿಟ್ಟಿನಲ್ಲಿ 949 ಶಾಲೆಗಳನ್ನು ಉನ್ನತೀಕರಿಸುವುದಾಗಿ ಘೋಷಿಸಿದ್ದರು.
ಅದರಂತೆ ಇದೀಗ 949 ಶಾಲೆಗಳನ್ನು ಉನ್ನತೀಕರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಆದೇಶಿಸಿರುವಂತ ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಯವರು, 2022-23ನೇ ಸಾಲಿನ ಆಯವ್ಯಯ ಘೋಷಿತ ಕಾರ್ಯಕ್ರಮ ಘೋಷಣೆಯಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವ್ಯಾಪ್ತಿಯಲ್ಲಿ ಬರುವ 949 ಶಾಲೆಗಳನ್ನು ಮಾದರಿ ಶಾಲೆಗಳಾಗಿ ಉನ್ನತೀಕರಿಸಲಾಗಿದೆ ಎಂದು ಆದೇಶಿಸಿದ್ದಾರೆ.

ಇನ್ನೂ ಈ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಉನ್ನತೀಕರಿಸಲು ರಾಜ್ಯ ವಲಯದ ಅನುದಾನದಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಮತ್ತು ಬರುವ ವರ್ಷಗಳಲ್ಲಿ ಲಭ್ಯವಾಗುವ ಅನುದಾನವನ್ನು ಈ ಶಾಲೆಗಳಿಗೆ ಆದ್ಯತೆ ಮೇರೆಗೆ ಅಗತ್ಯತೆಗೆ ತಕ್ಕಂತೆ ಬಳಸಿಕೊಂಡು, ಶಾಲೆಗಳನ್ನು ಶೈಕ್ಷಣಿಕವಾಗಿ ಮಾದರಿ ಶಾಲೆಗಳಾಗಿ ಉನ್ನತೀಕರಿಸಲು ಕ್ರಮವಹಿಸುವಂತೆ ಸೂಚಿಸಿದ್ದಾರೆ.
ಮಾದರಿ ಶಾಲೆಗಳನ್ನಾಗಿ ಉನ್ನತೀಕರಿಸಲಾದ ಶಾಲೆಗಳಿಗೆ ಯಾವುದೇ ಹೆಚ್ಚುವರಿ ಅನುದಾನವನ್ನು ಸರ್ಕಾರದಿಂದ ಕೋರತಕ್ಕದ್ದಲ್ಲ. ಸದರಿ ಶಾಲೆಗಳಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳು ಲಭ್ಯವಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು ಎಂದು ಹೇಳಿದ್ದಾರೆ.

