ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಎಸ್.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Advertisement. Scroll to continue reading.
ಎಸ್ ಎಂ ಕೃಷ್ಣ ಅವರು ಐಸಿಯುನಲ್ಲಿದ್ದಾರೆ . ವಿಶೇಷ ನಿಗಾ ವಹಿಸಲಾಗುತ್ತಿದೆ. ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಏಪ್ರಿಲ್ 21ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚೇತರಿಸಿಕೊಂಡಿದ್ದ ಅವರು ಡಿಸ್ಚಾರ್ಜ್ ಆಗಿದ್ದರು. ಮತ್ತೆ ಏಪ್ರಿಲ್ 29 ರಂದು ಆಸ್ಪತ್ರೆಗೆ ದಾಖಲಾಗಿದ್ದರು.
Advertisement. Scroll to continue reading.