ಉಡುಪಿ : ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ರಘುಪತಿ ಭಟ್ ಗೆ ಟಿಕೆಟ್ ಕೈ ತಪ್ಪಿತ್ತು. ಈ ಬಗ್ಗೆ ಅಸಾಮಾಧಾನ ಹೊರಹಾಕಿದ್ದರು ಕೂಡಾ. ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ರಘುಪತಿ ಭಟ್ ಘೋಷಿಸಿದ್ದಾರೆ.
ಕರಾವಳಿಗೆ ಪಕ್ಷದಿಂದ ಅನ್ಯಾಯವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದೇನೆ. ಪಕ್ಷದ ವರಿಷ್ಠರು ಟಿಕೆಟ್ ಭರವಸೆ ನೀಡಿದ್ದರು. ಈಗ ನಿರ್ಧಾರ ಬದಲಾಗಿದೆ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತಿರಲಿಲ್ಲ. ಆದರೆ ಹಣ ಬಲ, ಜಾತಿ ಬಲಕ್ಕೆ ಟಿಕೆಟ್ ಸಿಕ್ಕಿದೆ. ಹೀಗಾಗಿ ಜನರೊಂದಿಗೆ ಇದ್ದು ಕೆಲಸ ಮಾಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧಾರ ಮಾಡಿದ್ದೇನೆ ಎಂದು ಹೇಳಿದ್ದಾರೆ.
Advertisement. Scroll to continue reading.