ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ರಂಗೇರುತ್ತಿದೆ.
ಈ ನಡುವೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ನಿರ್ವಹಣಾ ಸಮಿತಿ ರಚನೆ ಮಾಡಿದೆ.
ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ನೇಮಿಸಲಾಗಿದೆ. ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಶೋಭಾ ಕರಂದ್ಲಾಜೆ ನೇಮಕ ಮಾಡಲಾಗಿದೆ.
ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ 25 ನಾಯಕರಿಗೆ ಸ್ಥಾನ ಸಿಗಲಿದೆ. 25 ಜನರ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಸ್ಥಾನ ನೀಡಲಾಗಿದೆ.ಇನ್ನು ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ನಾಯಕರನ್ನು ನೇಮಕ ಮಾಡಲಾಗಿದೆ. ಇದರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತ ಕುಮಾರ್‌ಗೆ ಸ್ಥಾನ ನೀಡಲಾಗಿದೆ.
Advertisement. Scroll to continue reading.

In this article:basavaraj Bommai, bjp, Diksoochi news, diksoochi Tv, diksoochi udupi, election 2023, Shobha Karandlaje

Click to comment