ಮಂಡ್ಯ : ಮೋದಿ ನಾಯಕತ್ವದಲ್ಲಿ ಮಾತ್ರವೇ ದೇಶದಲ್ಲಿ ಅಭಿವೃದ್ಧಿ ಸಾಧ್ಯ. ನನ್ನ ಹಲವು ಹೋಜನೆಗಳಿಗೆ ಕೇಂದ್ರದಿಂದ ಅಪಾರ ನೆರವು ಸಿಕ್ಕಿದೆ. ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದೇನೆ. ಬದಲಾವಣೆಗಾಗಿ ನನಗೆ ಇನ್ನಷ್ಟು ಶಕ್ತಿಯ ಅಗತ್ಯವಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.
ಸುಮಾರು ಒಂದು ವರ್ಷದಿಂದ ಬಿಜೆಪಿಯವರು ನನಗೆ ಆಹ್ವಾನ ನೀಡಿದ್ದಾರೆ. ನಾನೆಂದೂ ಕುಟುಂಬ ರಾಜಕಾರಣ ಮಾಡೋದಿಲ್ಲ. ಅಭಿಷೇಕ್‌ಗೆ ನಾನು ಎಲ್ಲಿಯೂ ಟಿಕೆಟ್ ಕೇಳಲ್ಲ. ಇದು ಚಾಮುಂಡೇಶ್ವರಿ ತಾಯಿಯ ಮೇಲೆ ಆಣೆ. ನಾನು ರಾಜಕಾರಣದಲ್ಲಿ ಇರುವವರೆಗೂ ಅಭಿಷೇಕ್ ಅಂಬರೀಶ್ ರಾಜಕಾರಣಕ್ಕೆ ಬರೋದಿಲ್ಲ. ನನ್ನ ಮಗನ ಭವಿಷ್ಯವನ್ನು ಚಾಮುಂಡಿ ತಾಯಿಯೇ ನೋಡಿಕೊಳ್ಳುತ್ತಾಳೆ. ಚುನಾವಣೆಗೆ ನಿಲ್ಲುವಂತೆ ಅಭಿಷೇಕ್‌ಗೆ ಎರಡು ಪಕ್ಷಗಳಿಂದ ಆಹ್ವಾನ ಬಂದಿತ್ತು ಎಂದು ಅವರು ತಿಳಿಸಿದರು.
ಸದ್ಯಕ್ಕೆ ಬಿಜೆಪಿಗೆ ಬೆಂಬಲವನ್ನು ಘೋಷಣೆ ಮಾಡುತ್ತಿದ್ದೇನೆ. ಆದರೆ, ಅಧಿಕೃತವಾಗಿ ಪಕ್ಷ ಸೇರಲು ತಾಂತ್ರಿಕ ತೊಡಕುಗಳಿದ್ದು, ಅದೆಲ್ಲವೂ ಕ್ಲಿಯರ್ ಆದ ಬಳಿಕ ಪಕ್ಷವನ್ನು ಸೇರಿಕೊಳ್ಳಲಿದ್ದೇನೆ ಎಂದು ಸುಮಲತಾ ಹೇಳಿದ್ದಾರೆ. ಬಹಳ ಯೋಚನೆ ಮಾಡಿ ಈ ನಿರ್ಧಾರ ಮಾಡಿದ್ದೇನೆ. ಮೋದಿ ನಾಯಕತ್ವದಲ್ಲಿ ದೇಶ ಪ್ರಗತಿ ಕಂಡಿದೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

