Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಕಾರು ಮತ್ತು ಮೀನು ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

1

ಉಡುಪಿ : ಕಾರು ಮತ್ತು ಮೀನು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಹಲವರು ಗಾಯಗೊಂಡಿರುವ ಘಟನೆ  ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ನಡೆದಿದೆ.

ಮೀನಿನ ಟ್ಯಾಂಕರ್ ಕೇರಳದ ಕಡೆಗೆ ಸಾಗುತ್ತಿತ್ತು. ಈ ವೇಳೆ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿದ ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಲಾರಿ ಹಾಗೂ ಕಾರು ಜಖಂಗೊಂಡಿದೆ.

ಘಟನೆಯಿಂದ ಕೆಲ ಕಾಲ ಸಂಚಾರಕ್ಕೆ ಅಡಚಣೆಯಾಗಿತ್ತು. ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಮೀನುಗಳನ್ನು ಬೇರೆ ವಾಹನಕ್ಕೆ ಸ್ಥಳಾಂತರ ಮಾಡಲಾಯಿತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ದುಬೈ : ದುಬೈನಂತಹ ಮರುಭೂಮಿಯ ನಾಡಿನಲ್ಲಿ ಕಾಡು ಬೆಳೆಸಲು ಸಾಧ್ಯ ಎಂಬ ಸಂದೇಶ ವಿಶ್ವಕ್ಕೆ ನೀಡೋಣ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ, ಫಾರೆಸ್ಟರ್ ಕ್ರಿಯೇಟರ್ಸ್‌ನ ಸಂಸ್ಥಾಪಕ ಪರಿಸರ ತಜ್ಞ ಡಾ.ಆರ್.ಕೆ.ನಾಯರ್...

ಸಿನಿಮಾ

0 ಬೆಂಗಳೂರು : ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ , ಅವರ ಗೆಳತಿ ಪವಿತ್ರಾ ಗೌಡ ಸೇರಿ 13 ಮಂದಿಗೆ 6 ದಿನ ಪೊಲೀಸ್‌ ಕಸ್ಟಡಿಗೆ ನ್ಯಾಯಾಲಯ...

error: Content is protected !!