Connect with us

Hi, what are you looking for?

Diksoochi News

ರಾಜ್ಯ

ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

1

ಉಡುಪಿ : ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿ ಆದೇಶಿಸಲಾಗಿದೆ.

ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್‌ ಈ ಅದೇಶ ಹೊರಡಿಸಿದ್ದಾರೆ.

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!