Connect with us

Hi, what are you looking for?

Diksoochi News

ರಾಜ್ಯ

ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್: ಸಿಎಂ, ಡಿಸಿಎಂಗೆ ಜಾಮೀನು

0

ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ  ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ.

ಇದೊಂದು ಖಾಸಗಿ ದೂರು ಆಗಿದ್ದು, ಮೊದಲ ಬಾರಿ ವಿಚಾರಣೆಗೆ ಹಾಜರಾಗಿದ್ದೇವೆ. ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜಾಮೀೂನು ಬಾಂಡ್ ಗೆ ಸಹಿ ಹಾಕಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

Advertisement. Scroll to continue reading.

ವಿಧಾನ ಪರಿಷತ್‌ ಸದಸ್ಯ ಬಿಜೆಪಿ ಮುಖಂಡ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ವಿಚಾರಣೆಗೆ ಬಂದಿದ್ದು, ಇಂದು ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರಾದರು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಆರೋಪಿಸಿದ್ದ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿತ್ತು.

2,500 ಕೋಟಿ ರೂಪಾಯಿ ಬಿಜೆಪಿ ಹೈಕಮಾಂಡ್‌ಗೆ ಕೊಟ್ಟರೆ ಸಿಎಂ ಹುದ್ದೆ ಸಿಗುತ್ತದೆ” ಎಂದಿದ್ದ ಆರೋಪ, ಕೋವಿಡ್ ಕಿಟ್ ಖರೀದಿ ಹಗರಣ, 40% ಕಮಿಷನ್ ಆರೋಪಗಳನ್ನು ಮಾಡಿದ್ದ ಕೈ ನಾಯಕರ ಮೇಲೆ ಕೇಶವ ಪ್ರಸಾದ್‌ ಮಾನನಷ್ಟ ಮೊಕದ್ದಮೆ ಹಾಕಿದ್ದರು. 08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರ ದಾಖಲು ಮಾಡಿದ್ದರು. ಈ ಪ್ರಕರಣದ ಕುರಿತು ಸಿಎಂ, ಡಿಸಿಎಂ ವಿಚಾರಣೆಗೆ ಹಾಜರಾಗಿದ್ದಾರೆ.

ರಾಹುಲ್ ಗಾಂಧಿ ಗೈರು: ಇಂದು ವಿಚಾರಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೈರು ಹಾಜರಾಗಿದ್ದು, ಅವರಿಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ಎಂದು ಇಂದು ಮಧ್ಯಾಹ್ನ 3 ಗಂಟೆಗೆ ತೀರ್ಪು ಹೊರಬೀಳಲಿದೆ.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!