ನವದೆಹಲಿ: ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಈಶ್ವರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಯವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಕ್ಯಾಬಿನೆಟ್ ಮಂತ್ರಿಯಾಗಿ ರಾಜನಾಥ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರನ ಹೆಸರಿನಲ್ಲಿ ರಾಜನಾಥ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಬಿಜೆಪಿ ಹಿರಿಯ ಸಂಸದ ಅಮಿತ್ ಶಾ ಅವರು ಸಹ ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಮೋದಿ ಸಂಪುಟದ ಕ್ಯಾಬಿನೆಟ್ ಸಚಿವರಾಗಿ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಮಾಣವಚನ ಸ್ವೀಕರಿಸಿದರು.
ಮಧ್ಯ ಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಡಾ ಎಸ್ ಜೈಶಂಕರ್, ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಹೆಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಅವರು ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹರ್ಯಾಣದ ಮಾಜಿ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್,ಬಿಹಾರದ ಮಾಜಿ ಮುಖ್ಯಮಂತ್ರಿ ಹಿಂದೂಸ್ತಾನ್ ಅವಾಮಿ ಮೋರ್ಚಾ ಪಕ್ಷದ ನಾಯಕ ಜಿತನ್ ರಾಮ್ ಮಾಂಝಿ, ಬಿಹಾರದ ಜೆಡಿಯು ಸಂಸದ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಅವರು ನಿತೀಶ್ ಕುಮಾರ್ ಅವರ ಜೆಡಿಯು ಕೋಟಾದಿಂದ ಮೋದಿ ಸಂಪುಟಕ್ಕೆ ಸೇರ್ಪಡೆಯಾದರು.
ಅಸ್ಸಾಂನ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಸಭೆ ಸಂಸದ ಸರ್ಬಾನಂದ್ ಸೊನೊವಾಲ್, ಮಧ್ಯಪ್ರದೇಶದ ಬಿಜೆಪಿ ಸಂಸದ ಡಾ ವಿರೇಂದ್ರ ಕುಮಾರ್ ಖಾಟಿಕ್
ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಸಂಸದ ಕಿಂಜರಪು ರಾಮ್ ಮೋಹನ್ ನಾಯ್ಡು, ಶ್ರೀಕಾಕುಳಂ ಕ್ಷೇತ್ರದ ಸಂಸದರಾಗಿರುವ ನಾಯ್ಡು ಮೋದಿ ಕ್ಯಾಬಿನೆಟ್ ಸೇರಿದ್ದಾರೆ.