Connect with us

Hi, what are you looking for?

Diksoochi News

ರಾಜ್ಯ

ಬೈಕ್‌ ಬಿಟ್ಟು ಬಂದಿದ್ದಕ್ಕೆ ಹೆಲ್ಮೆಟ್‌ನಿಂದ ಹೊಡೆದ ಮಗನನ್ನು ಇರಿದು ಕೊಂದ ತಂದೆ!

0

ಬೆಂಗಳೂರು: ದ್ವಿಚಕ್ರ ವಾಹನ ಎಲ್ಲೋ ಬಿಟ್ಟು ಮನೆಗೆ ಬಂದಿದ್ದ ವಿಚಾರಕ್ಕೆ ಜಗಳ ನಡೆದು ತಂದೆಯೇ ಮಗನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಅನ್ನಪೂರ್ಣೇಶ್ವರಿ ನಗರದ ಮುದ್ದನಪಾಳ್ಯದಲ್ಲಿ ನಡೆದಿದೆ.

ಅಂಜನ್ ಕುಮಾರ್(27) ಕೊಲೆಯಾದ ಮಗ. ವೆಂಕಟೇಶ್ (57) ಬಂಧಿತ ಆರೋಪಿ. ಆರೋಪಿಯನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ವಿಚಾರಣೆ ನಡೆಸಿ ಬಂಧಿಸಿದ್ದಾರೆ.

ವೆಂಕಟೇಶ್ ತನ್ನ ಕುಟುಂಬದ ಜೊತೆಗೆ ಮುದ್ದನಪಾಳ್ಯದಲ್ಲಿ ನೆಲೆಸಿದ್ದು, ರಿಯಲ್ ಎಸ್ಟೇಟ್‌ ಬ್ರೋಕರ್‌ ಕೆಲಸ ಮಾಡುತ್ತಿದ್ದ. ಮಗಳು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ಅಂಜನ್‌ ಪಿಯುಸಿ ಮೊಟಕುಗೊಳಿಸಿ ಮನೆಯಲ್ಲಿ ಇರುತ್ತಿದ್ದ. 

Advertisement. Scroll to continue reading.

ಭಾನುವಾರ ಸಂಜೆ ವೆಂಕಟೇಶ್‌ ಮಗಳ ದ್ವಿಚಕ್ರ ವಾಹನವನ್ನು ತೆಗೆದುಕೊಂಡು ಹೊರಗೆ ಹೋಗಿದ್ದರು. ಆದರೆ ರಾತ್ರಿ ದ್ವಿಚಕ್ರ ವಾಹನದ ಜೊತೆ ಮನೆಗೆ ಬಂದಿರಲಿಲ್ಲ.

ಬೈಕ್ ವಿಚಾರವಾಗಿ ಅಂಜನ್ ಕುಮಾರ್, ತಂದೆ ವೆಂಕಟೇಶ್‌ನನ್ನು ಪ್ರಶ್ನೆ ಮಾಡಿದ್ದಾನೆ. ಇದಕ್ಕೆ ವೆಂಕಟೇಶ್‌ ಎಲ್ಲೋ ನಿಲ್ಲಿಸಿದ್ದೇನೆ. ಈಗ ತರುತ್ತೇನೆ ಎಂದು ಹೇಳಿದ್ದಾನೆ. ಈ ವಿಚಾರದ ಬಗ್ಗೆ ಮಾತಿಗೆ ಮಾತು ಬೆಳೆದು ಅಂಜನ್‌ ಹೆಲ್ಮೆಟ್‌ನಿಂದ ತಂದೆಗೆ ಹೊಡೆದಿದ್ದಾನೆ.

ತನ್ನ ಮೇಲೆ ಮಗ ಹೊಡೆದಿದ್ದಕ್ಕೆ ಸಿಟ್ಟಾದ ತಂದೆ ವೆಂಕಟೇಶ್‌ ಅಡುಗೆ ಮನೆಗೆ ತೆರಳಿ ಚಾಕು ತಂದು ಅಂಜ್‌ನ ಎಡಭಾಗದ ಎದೆಗೆ ಇರಿದಿದ್ದಾನೆ. ವಿಪರೀತ ರಕ್ತಸ್ರಾವದಿಂದಾಗಿ ಅಂಜನ್‌ ಅಲ್ಲೇ ಕುಸಿದು ಬಿದ್ದಿದ್ದಾನೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾನೆ. ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ವೆಂಕಟೇಶ್‌ನನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ:  ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಯವರಿಗೆ ರಾಷ್ಟ್ರಪತಿ ದ್ರೌಪದಿ...

ಕರಾವಳಿ

0 ಉಡುಪಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಪ್ರಾರಂಭೋತ್ಸವ ಕಾರ್ಯಕ್ರಮ ಪಿಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪ್ರಾರಂಭೋತ್ಸವವನ್ನು ಭಾರತ ಮಾತೆ, ಸರಸ್ವತಿ, ಓಂಕಾರ ಭಾವಚಿತ್ರಕ್ಕೆ ದೀಪಬೇಳಗಿಸಿ, ಪುಷ್ಪಾರ್ಚನೆ ಮಾಡುವ ಮೂಲಕ...

ರಾಷ್ಟ್ರೀಯ

0 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾತ್ರದಲ್ಲಿರುವ ಶಿವಖೋಡ ದೇವಸ್ಥಾನಕ್ಕೆ ತೆರಳಿದ್ದ ಯಾತ್ರಾರ್ಥಿಗಳ ಬಸ್ ಮೇಲೆ ಶಂಕಿತ‌ ಉಗ್ರರು ದಾಳಿ ನಡೆಸಿದ್ದಾರೆ. ಪರಿಣಾಮ ಬಸ್ ಪ್ರಪಾತಕ್ಕೆ ಉರುಳಿಬಿದ್ದಿದ್ದು, 10 ಭಕ್ತರು ಮೃತಪಟ್ಟಿದ್ದಾರೆ. ಕಾಂದಾ...

ರಾಷ್ಟ್ರೀಯ

0 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ 7.15ರಿಂದ  ಮೋದಿ ಅವರ ಜತೆ 71 ಸಚಿವರು ಪ್ರತಿಜ್ಞಾವಿಧಿ ಸ್ವೀಕರಿಸಿದರು....

ರಾಜ್ಯ

0 ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಇಂದು ಬೆಳಗಿನ ಜಾವ ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿದ್ದ ದರ್ಶನ್ ಬಂಧನವಾಗಿದೆ. ದರ್ಶನ್ ಜೊತೆಯಲ್ಲಿ ಇಬ್ಬರು ಬಾಡಿಗಾರ್ಡ್‌ಗಳನ್ನು ಸಹ ಪೊಲೀಸರು ಬಂಧಿಸಿದ್ದಾರೆ....

error: Content is protected !!