ಮಂಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ.
ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ,ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 27/06/24 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಲವು ಮುನ್ನೆಚ್ಚರಿಕೆ ಕ್ರಗಳನ್ನು ಗೊಳ್ಳುವಂತೆ ಸೂಚನೆ ನೀಡಿದೆ
Advertisement. Scroll to continue reading.
In this article: