ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ಸಿಐಡಿ ಪೊಲೀಸ್ ಕಸ್ಟಡಿ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಕೊನೆಗೊಂಡಿತ್ತು. ಹೀಗಾಗಿ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಐದು ದಿನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಹೀಗಾಗಿ ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್ ಸೂರಜ್‌ಗೆ ಜುಲೈ 3ರವರೆಗೆ ಕಸ್ಟಡಿ ವಿಸ್ತರಿಸಿದೆ.
Advertisement. Scroll to continue reading.