Connect with us

Hi, what are you looking for?

Diksoochi News

ರಾಷ್ಟ್ರೀಯ

ಹತ್ರಾಸ್‌ ಕಾಲ್ತುಳಿತದಲ್ಲಿ 100ಕ್ಕೂ ಹೆಚ್ಚು ಸಾವು; ಪರಿಹಾರ ಘೋಷಣೆ

0

ಹತ್ರಾಸ್‌ : ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 100 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 150 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.

ರತಿಭಾನಪುರದಲ್ಲಿ ನಡೆದ ಭೋಲೆಬಾಬಾ ಪ್ರವಚನ ಕಾರ್ಯಕ್ರಮದ ನಂತರ ಈ ದುರ್ಘಟನೆ ಸಂಭವಿಸಿದೆ.

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Advertisement. Scroll to continue reading.

ಮೃತರ ಕುಟಂಬಗಳಿಗೆ ತಲಾ 2 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!