ಮಂಗಳೂರು : ದ.ಕ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ.
ಬಲ್ಮಠ ರಸ್ತೆಯಲ್ಲಿ ಕಟ್ಟಡದ ಮಣ್ಣು ಕುಸಿದು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ.
ಚಂದನ್ ಕುಮಾರ್ (30) ಮತ್ತು ರಾಜಕುಮಾರ್ (18) ಮಣ್ಣಿನಡಿ ಸಿಲುಕಿರುವ ಕಾರ್ಮಿಕರು. ಘಟನೆಯಲ್ಲಿ ಓರ್ವ ಕಾರ್ಮಿಕ ರಾಜ್ ಕುಮಾರ್ ಅವರನ್ನು ರಕ್ಷಣಾ ತಂಡ ಮೇಲಕೆತ್ತಿದೆ. ಬಳಿಕ ಆರೋಗ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಿದೆ.
ಮಣ್ಣಿನ ಅಡಿಯಲ್ಲಿ ಸಿಲುಕಿರುವ ಮತ್ತೋರ್ವ ಕಾರ್ಮಿಕನಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕ್ರೇನ್ ಮೂಲಕ ಜೆಸಿಬಿಯನ್ನು ಕೆಳಗಿಸುವ ಕಾರ್ಯ ಆರಂಭವಾಗಿದೆ. ಘಟನಾ ಸ್ಥಳಕ್ಕೆ ಎನ್ಡಿಆರ್ಎಫ್ ತಂಡ ಆಗಮಿಸಿದ್ದು, ರಕ್ಷಣಾಕಾರ್ಯ ನಡೆಯುತ್ತಿದೆ.
Advertisement. Scroll to continue reading.