ಉಡುಪಿ : ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದೆ. ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ಭಾಗಗಳ ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶುಕ್ರವಾರ (ಜುಲೈ 5) ರಜೆ ಘೋಷಣೆ ಮಾಡಲಾಗಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕುಗಳ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ನಾಳೆ, ಜು.5) ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್. ರಜೆ ಘೋಷಿಸಿದ್ದಾರೆ.
Advertisement. Scroll to continue reading.