ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೆರೆ ಭೀತಿ ಎದುರಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳು ಅಲ್ಲದೇ ಪದವಿ ಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಈ ಮೊದಲು ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆಯನ್ನು ಘೋಷಿಸಿ ಆದೇಶಿಸಲಾಗಿತ್ತು.
Advertisement. Scroll to continue reading.