ಭಾರತೀಯ ಸೇನೆಯ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ.
ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಇಂದು ಬೆಳಗ್ಗೆ 09:15ರ ಸುಮಾರಿಗೆ ಅರುಣಾಚಲ ಪ್ರದೇಶದ ಬೊಮ್‌ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಆರ್ಮಿ ಏವಿಯೇಷನ್ ಚೀತಾ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಬೊಮ್ಡಿಲಾ ಪಶ್ಚಿಮದ ಮಂಡಲ ಬಳಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಹುಡುಕಾಟ ಪ್ರಾರಂಭಿಸಲಾಗಿದೆ ಎಂದು ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್, PRO ರಕ್ಷಣಾ ಗುವಾಹಟಿ ತಿಳಿಸಿದ್ದಾರೆ.
Advertisement. Scroll to continue reading.

In this article:Cheetahs helicopter, Diksoochi news, diksoochi Tv, diksoochi udupi, Featured, mandala hils

Click to comment