Connect with us

Hi, what are you looking for?

ಸಿನಿಮಾ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮದಿನ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

1

ಬೆಂಗಳೂರು : ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಸಮಾಧಿ ಬಳಿ ಪುನೀತ್ ಹುಟ್ಟು ಹಬ್ಬ ಆಚರಣೆ ಮಾಡಲಾಗುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ರಾಜ್‌ ಕುಟುಂಬ ಭೇಟಿ ನೀಡಿದ್ದಾರೆ.

ಅಪ್ಪು ಸಮಾಧಿ , ರಾಜ್‌ ಕುಮಾರ್‌ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

ನಸುಕಿನ ಜಾವವೇ ಪುನೀತ್ ಸೋದರ ನಟ ರಾಘವೇಂದ್ರ ರಾಜ್ ಕುಮಾರ್ ಕುಟುಂಬಸ್ಥರು, ಪುನೀತ್ ಪುತ್ರಿ ವಂದಿತಾ, ಅಶ್ವಿನಿ ಪುನೀತ್ ರಾಜ್ ಕುಮಾರ್, ನಟ ಶಿವರಾಜ್ ಕುಮಾರ್ ಕುಟುಂಬ ಸೇರಿದಂತೆ ಇತರರು ಸಮಾಧಿ ಬಳಿ ಬಂದು ಪೂಜೆ ಸಲ್ಲಿಕೆ ಮಾಡಿದ್ದಾರೆ. ಅವರ ಇಷ್ಟದ ತಿನಿಸುಗಳು, ಕೇಕ್ ಇಟ್ಟು ಕತ್ತರಿಸಿ, ಪೂಜೆ ಸಲ್ಲಿಸಿ ತಿಂದು ಗೌರವ ಸಲ್ಲಿಸಿದ್ದಾರೆ.

Advertisement. Scroll to continue reading.

ಈಗಾಗಲೇ ಅಪ್ಪು’ ಸಮಾಧಿ ದರ್ಶನಕ್ಕೆ ಅಭಿಮಾನಿಗಳು ಆಗಮಿಸುತ್ತಿದ್ದು, ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ.

ಅಪ್ಪು ನೆನೆದ ಕರುನಾಡು :


ಇನ್ನು ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ ಕುಮಾರ್‌ ಜನ್ಮದಿನ ಆಚರಣೆ ಹಿನ್ನೆಲೆಯಲ್ಲಿ ಗಣ್ಯರು ಅಭಿಮಾನಿಗಳು ಅಪ್ಪುವನ್ನು ನೆನೆದು ಕಂಬನಿ ಮಿಡಿದಿದ್ದಾರೆ.

ಮಾಜಿ ಪ್ರಧಾನಿ ಹೆಚ್.‌ ಡಿ ದೇವೇಗೌಡ ಪುನೀತ್‌ ಜನ್ಮದಿನವನ್ನು ಸ್ಮರಿಸಿದ್ದಾರೆ. ಚಿಕ್ಕವಯಸ್ಸಿನಲ್ಲೇ ಸಾಧನೆ ಮಾಡಿ ನಾಡಿನ ಕೀರ್ತಿ ಪಾತಕೆ ಹಾರಿಸಿದ್ದಾರೆ. ಎಲ್ಲರಿಗೂ ಸ್ಪೂರ್ತಿ , ಮಾದರಿ ಗಣಿಯಾದ ಪುನೀತ್‌ ಜನ್ಮದಿನ ಸ್ಮರಣಿಸಲಾಗಿದೆ. ನಮ್ಮೆಲ್ಲರ ಪ್ರೀತಿಗೆ ಪಾತ್ರರಾಗಿದ್ದ ಅಪ್ಪು ಅವರ ನೆನಪು ಚಿರಂತನವಾಗಿದೆ. ಪುನೀತ್‌ ರಾಜ್‌ ಕುಮಾರ್‌ ಜನ್ಮದಿನ ಗೌರವ ಪೂರ್ವಕ ನಮನಗಳು ಎಂದು ಹೇಳಿದ್ದಾರೆ.

Advertisement. Scroll to continue reading.

ಅತಿ ಚಿಕ್ಕ ವಯಸ್ಸಿನಲ್ಲಿಯೇ ಅಗಾಧವಾದ ಸಾಧನೆಗೈದು, ಎಲ್ಲರಿಗೂ ಮಾದರಿಯಾಗಿರುವ ಪ್ರೀತಿಯ ಅಪ್ಪು, ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಜನ್ಮಸ್ಮರಣೆಯಂದು ಗೌರವಪೂರ್ವಕ ನಮನಗಳು. ‘ಅಪ್ಪು’ ಸದಾ ಅಜರಾಮರ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. 

ಪ್ರತಿಭಾವಂತ ನಟನಾಗಿ, ಹೃದಯವಂತ ಸಮಾಜ ಸೇವಕನಾಗಿ ಕೋಟ್ಯಂತರ ಜನರ ಮನಸ್ಸಿಗೆ ಮುದ ನೀಡಿದ, ಸರಳತೆ‌,‌ ಸಜ್ಜನಿಕೆ ಮತ್ತು ಮಾನವೀಯತೆಗೆ ಮತ್ತೊಂದು ಹೆಸರಾಗಿದ್ದ ‌ಕನ್ನಡಿಗರೆಲ್ಲರ ಮನೆ ಮಗ ಪ್ರೀತಿಯ ಅಪ್ಪು ಅವರನ್ನು ಅವರ ಜನ್ಮದಿನದಂದು ಗೌರವದಿಂದ ನೆನೆಯುತ್ತೇನೆ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!