ಚಾಮರಾಜನಗರ : ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದ ಮಾದಪ್ಪನ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರಿ.
ಸಿಎಂ ಬೊಮ್ಮಾಯಿ ಅವರು ಕ್ರೇನ್‌ನಿಂದ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಮಾದಪ್ಪನ ಬೃಹತ್ ಪ್ರತಿಮೆ ಅನಾವರಣ ಮಾಡಿದರು.
ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ಮಹದೇಶ್ವರನ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಪ್ರತಿಮೆಯು 108 ಅಡಿ ಎತ್ತರವಿದೆ. ಮಹದೇಶ್ವರ ಸ್ವಾಮಿ ಜೀವನ ಚರಿತ್ರೆ ಸಾರುವ ಮ್ಯೂಸಿಯಂ, ಪ್ರತಿಮೆಯ ಸ್ಥಳದಲ್ಲಿ ಬಯಲು ರಂಗಮಂದಿರ, ಗಿಡಮೂಲಿಕಾ ವನಗಳ ಅಭಿವೃದ್ಧಿ ಸೇರಿದಂತೆ ಇತರೆ ಕಾಮಗಾರಿಗಳು ನಡೆಯಲಿದೆ.

ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಕಾರವು ಒಂದು ಎಕರೆ ಜಾಗದಲ್ಲಿ ಪ್ರತಿಮೆ ಹಾಗೂ ವಸ್ತು ಸಂಗ್ರಹಾಲಯಕ್ಕೆ 20 ಕೋಟಿ ರೂ. ವೆಚ್ಚ ಮಾಡಿದೆ. ವಸ್ತು ಸಂಗ್ರಹಾಲಯದ ಕೆಲಸವು ಶೇ.50ಕ್ಕಿಂತಲೂ ಕಡಿಮೆ ಪೂರ್ಣಗೊಂಡಿದ್ದು, ರಸ್ತೆ ಕಾಮಗಾರಿ, ಉದ್ಯಾನವನಗಳು, ಕುಡಿಯುವ ನೀರು, ಶೌಚಾಲಯಗಳು ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳ ಕಾರ್ಯಗಳು ಪೂರ್ಣಗೊಂಡಿಲ್ಲ.
ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಕಾರವು ಒಂದು ಎಕರೆ ಜಾಗದಲ್ಲಿ ಪ್ರತಿಮೆ ಹಾಗೂ ವಸ್ತು ಸಂಗ್ರಹಾಲಯಕ್ಕೆ 20 ಕೋಟಿ ರೂ. ವೆಚ್ಚ ಮಾಡಿದೆ.

