ವಿಜಯಪುರ : ಕಲಬುರಗಿಯಲ್ಲಿ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಿಎಸ್ ವೈ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿದ್ದವು. ಇದೀಗ ಮತ್ತೊಂದು ಘಟನೆ ನಡೆದಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ.
ವಿಜಯಪುರ ನಗರದ ಸೈನಿಕ ಶಾಲಾ ಆವರಣದಲ್ಲಿ ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ಆಗಮಿಸುತ್ತಿದ್ದರು. ಆದರೆ ಶಾಲಾ ಆವರಣದಲ್ಲಿ ಜೋಶಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ.
Advertisement. Scroll to continue reading.

ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ. ನೆಲಕ್ಕೆ ಬಿದ್ದ ಬ್ಯಾರಿಕೇಡ್‌ಗಳನ್ನು ತಕ್ಷಣ ಪೊಲೀಸರು ಸರಿಪಡಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.
In this article:Diksoochi news, diksoochi Tv, diksoochi udupi, prahlad Joshi, vijayapura

Click to comment