ಬೆಂಗಳೂರು : ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ’ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಪಾಹೀನ್ ಪರ್ವೀನ್ ಆದೇಶ ಹೊರಡಿಸಿದ್ದು, ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 2ಎ ನ ಕ್ರಮ ಸಂಖ್ಯೆ:6 ಎ ಯಿಂದ ಕೂಟವರೆಗೆ ಕ್ರಮವಾಗಿ ಕುಂಬಾರ, ಚಕ್ರಸಾಲಿ ಗುಣಗ, ಗಣಗಿ, ಕೊಡವ, ಕುಲ, ಕುಲಾಲ, ಕುಂಬಾರ್, ಕುಂಬಾರ್ಡ್, ಕುಮಾರ ಕಸವನ್ ಜಾತಿಗಳಿಗೆ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ.
ಅಂತೆಯೇ ಇದೀಗ ಕುಂಬಾರ, ಚಕ್ರಸಾಲಿ, ಗುಣ, ಗಣ, ಕೊಡವ ಕುಲ, ಕುಲ, ಕುಂಬಾರ, ಬುಂಬಾರ, ಕುಲಾಲ ಪಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Karnataka government, kumbara, ಕುಂಬಾರ ಅಭಿವೃದ್ಧಿ ನಿಗಮ

Click to comment