ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷದಿಂದ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನ ಕುಮಾರ ಪಾರ್ಕ್ ವೆಸ್ಟ್ ರಸ್ತೆಯ ರೈಲ್ವೆ ಪ್ಯಾರಲರ್ ರಸ್ತೆಯಲ್ಲಿರುವಂತ ಅಮ್ ಆದ್ಮಿ ಪಾರ್ಟಿ ಕಚೇರಿಯಲ್ಲಿ ಮುಂಬರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಆಮ್ ಆದ್ಮಿ ಪಕ್ಷದ 80 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಬ್ರಿಜೇಶ್ ಕಾಳಪ್ಪ ಸೇರಿದಂತೆ ಹಲವರ ಸಮ್ಮುಖದಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದಾರೆ.
Advertisement. Scroll to continue reading.

ಮೊದಲ ಪಟ್ಟಿಯಲ್ಲಿ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ.
In this article:AAP, diksoochi Tv, diksoochi udupi, Diksoochinews, Karnataka Assembly Election 2023, ಆಮ್ ಆದ್ಮಿ

Click to comment