ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ಎರಡು ವಾರ ಮುಂದೂಡಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರಿದ್ದ ಪೀಠ ವಿಚಾರಣೆಯನ್ನು ಎರಡು ವಾರ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಏಪ್ರಿಲ್ 11 ರಂದು ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ 2006-07ರಲ್ಲಿ ಉಪಮುಖ್ಯಮಂತ್ರಿಯಾಗಿದ್ದಾಗ ಅಕ್ರಮವಾಗಿ ಎಕರೆಗಟ್ಟಲೆ ಭೂಮಿಯನ್ನು ಡಿನೋಟಿಫೈ ಮಾಡಿ ಉದ್ಯಮಿಗಳಿಗೆ ಜಮೀನು ಮಂಜೂರು ಮಾಡಿದ ಆರೋಪ ಹೊತ್ತಿದ್ದಾರೆ.
Advertisement. Scroll to continue reading.

ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. 2013ರಲ್ಲಿ ವಾಸುದೇವ ರೆಡ್ಡಿ ಎಂಬುವರು ಖಾಸಗಿ ದೂರಿನ ಮೇರೆಗೆ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಾಜಿ ಮುಖ್ಯಮಂತ್ರಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ ಐಟಿ ಪಾರ್ಕ್ ಅಭಿವೃದ್ಧಿ ಪಡಿಸಲು ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
In this article:Diksoochi news, diksoochi Tv, diksoochi udupi, Farmer CM BS Yediyurappa

Click to comment