ನವದೆಹಲಿ : ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿ ಲೋಕಸಭೆ ಸಚಿವಾಲಯ ಇಂದು ಅಧಿಸೂಚನೆ ಹೊರಡಿಸಿದೆ. ನಿನ್ನೆ ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನ ದೋಷಿ ಎಂದು ಘೋಷಿಸಿ, ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂಪಾಯಿ ದಂಡ ವಿಧಿಸಿತ್ತು.
2019ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ಇದೀಗ ಒಂದು ದಿನದ ನಂತರ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡ್ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ.
‘ಎಲ್ಲ ವಂಚಕರ ಉಪನಾಮ ಮೋದಿಯಾಗಿರುತ್ತದೆ’ ಎಂದು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸಲ್ಲಿಸಿದ ದೂರಿನ ಮೇರೆಗೆ ಗುಜರಾತ್ ನ್ಯಾಯಾಲಯವು ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅವರು ಅನರ್ಹಗೊಂಡಿದ್ದಾರೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Featured, rahul Gandhi, ಸದಸ್ಯತ್ವ ರದ್ದು

Click to comment