ಚಿಕ್ಕಬಳ್ಳಾಪುರ : ರಾಜ್ಯಕ್ಕೆ ಮತ್ತೆ ಮೋದಿ ಆಗಮಿಸಿದ್ದಾರೆ. ಇದೀಗ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮಕ್ಕೆ ಬಂದಿದೆ. ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.
ಪ್ರಧಾನಿ ಮೋದಿ ಬೆಂಗಳೂರಿನಿಂದ ಭಾರತೀಯ ಸೇನಾ ಹೆಲಿಕಾಪ್ಟರ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ಬಂದಿಳಿದಿದ್ದಾರೆ. ಪ್ರಧಾನಿ ಮೋದಿಯನ್ನು ಬಿಜೆಪಿ ನಾಯಕರು ಸ್ವಾಗತಿಸಿದರು. ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಡಾ. ಸುಧಾಕರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.
ಪ್ರಧಾನಿ ಮೋದಿ ಆಗಮನ ಹಿನ್ನಲೆ ಹೀಗಾಗಿ ಮುದ್ದೇನಹಳ್ಳಿ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 6 ಎಸ್ಪಿ, 9 ಡಿವೈಎಸ್ಪಿ, 39 ಇನ್ಸ್ಪೆಕ್ಟರ್ಗಳು, 98 ಪಿಎಸ್ಐ, 173 ಎಎಸ್ಐ, 1179 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
Advertisement. Scroll to continue reading.

In this article:chikkaballapura, Diksoochi news, diksoochi Tv, diksoochi udupi, PM Modi

Click to comment