ಪಡುಬಿದ್ರಿ : ಮನೆಯೊಂದಕ್ಕೆ ನುಗ್ಗಿದ ಕಳ್ಳರು 1.40 ರೂ. ಮೌಲ್ಯದ ನಗ-ನಗದು ಕಳವುಗೈದಿರುವ ಘಟನೆ ಕಾಪು ತಾಲೂಕಿನ ತೆಂಕ ಎರ್ಮಾಳು ಗ್ರಾಮದ ಬೀಚ್ ರಸ್ತೆಯ ಬಳಿ ನಡೆದಿದೆ.
ಬಾಗಲಕೋಟೆ ಮೂಲದ ಎರ್ಮಾಳು ಗ್ರಾಮದ ಬೀಚ್‍ರಸ್ತೆಯ ಬಾಡಿಗೆ ಮನೆಯಲ್ಲಿರುವ ನಿಂಗವ್ವ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ.
ನಿನ್ನೆ ಬೆಳಿಗ್ಗೆ ಎಂದಿನಂತೆ ನಿಂಗವ್ವ ಹಾಗೂ ಅವರ ಗಂಡ ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗಿದ್ದರು.
Advertisement. Scroll to continue reading.

ಮಧ್ಯಾಹ್ನದ ವೇಳೆ ನಿಂಗವ್ವ ಅವರ ಗಂಡ ವಾಪಾಸ್ಸು ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಮನೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದು ಒಳ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ 1,10,000 ರೂ. ನಗದು ಹಾಗೂ 30,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿಯ ಪೂಜಾ ಸಾಮಾಗ್ರಿಯನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.

In this article:Diksoochi news, diksoochi udupi, diksoochitv, Featured, Kaup, padubidri

Click to comment