ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ಸರಣಿ ಅಪಘಾತದಿಂದಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.
ಕಾರು, ಬೈಕ್ ಮತ್ತು ಬಸ್‌ಗಳ ನಡುವೆ ಸರಣಿ ಅಪಘಾತ ನಡೆದಿದೆ. ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ.
ಕುಂಭಾಶಿ ಹೊಳೆಕಟ್ಟು ಸಮೀಪದ ನಿವಾಸಿ ಪ್ರಶಾಂತ್ ಪೂಜಾರಿ(25) ಎಂಬವರು ಮೃತರು.
ಸಹಸವಾರ ವಿಘ್ನೇಶ್ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಂಭಾಶಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಸ್ಕೂಟರ್, ರಸ್ತೆಗೆ ಒಮ್ಮೆಲೆ ಅಡ್ಡ ಬಂದ ಕಾರಿಗೆ ಡಿಕ್ಕಿ ಹೊಡೆದದಿದೆ. ಪರಿಣಾಮ ಅದೇ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಕಾರು ಮತ್ತು ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರ ಮಧ್ಯೆ ಸಿಲುಕಿದ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.
