Connect with us

Hi, what are you looking for?

ರಾಷ್ಟ್ರೀಯ

ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

1

ನವದೆಹಲಿ : 224 ವಿಧಾನಸಭಾ ಕ್ಷೇತ್ರಗಳಿದ್ದು, ಪರಿಶಿಷ್ಟ ಜಾತಿಗೆ 36 ಮತ್ತು ಪರಿಶಿಷ್ಟ ಪಂಗಡಕ್ಕೆ 15 ಕ್ಷೇತ್ರಗಳನ್ನು ಮೀಸಲಿಡಲಾಗಿದೆ.
ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲಚೇತನ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದರು.
ಸುದ್ದಿಗೋಷ್ಟಿ ಮಾತನಾಡಿದ ಅವರು, 5.2 ಕೋಟಿ ಮತದಾರರು ಕರ್ನಾಟಕದಲ್ಲಿ ಇದ್ದಾರೆ. ಇವರಲ್ಲಿ 2.62 ಕೋಟಿ ಪುರುಷ ಮತದಾರರು ಇದ್ದರೇ, 2.5 ಮಹಿಳಾ ಮತದಾರರು ಇದ್ದಾರೆ. 80 ವರ್ಷ ಮೇಲ್ಪಟ್ಟ 12.15 ಲಕ್ಷ ಮತದಾರರಿದ್ದಾರೆ. ಅವರಿಗೂ ಅವಕಾಶ ನೀಡಲಾಗುತ್ತಿದೆ. 2.55 ಲಕ್ಷ ಅಂಗವಿಕಲ ಮತದಾರರಿದ್ದಾರೆ. ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದರು.

ಈ ಬಾರಿಯ ಚುನಾವಣೆಗಾಗಿ 58,282 ಮತಗಟ್ಟೆಗಳನ್ನು ಸ್ಥಾಪಸಿಲಾಗಿದೆ. 20,866 ನಗರ ಪ್ರದೇಶಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಒಂದು ಮತಗಟ್ಟೆಯಲ್ಲಿ ಸರಾಸರಿ 883 ಮತದಾರರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. 1,320 ಮಹಿಳೆಯರಿಗಾಗಿಯೇ ಮತದಾನಕ್ಕೆ ಬೂತ್ ಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like