ನವದೆಹಲಿ : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ದುಬೈಗೆ ತೆರಳುತ್ತಿದ್ದ ಫೆಡ್‌ಎಕ್ಸ್ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದಿದೆ.
ತಕ್ಷಣ ವಿಮಾನ ನಿಲ್ದಾಣದ ಅಧಿಕಾರಿಗಳು ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.
ಅಂದ್ಹಾಗೆ, ಕಳೆದ ತಿಂಗಳು ಹಕ್ಕಿಗಳ ದಾಳಿಯಿಂದಾಗಿ ಪುಣೆಗೆ ತೆರಳುತ್ತಿದ್ದ ಏರ್ ಏಷ್ಯಾ ವಿಮಾನ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.
Advertisement. Scroll to continue reading.

In this article:airplane, Diksoochi news, diksoochi udupi, diksoochitv, Emergency At Delhi Airport, Featured

Click to comment