ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರಲ್ಲಿ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಅವರು ಭಾನುವಾರ ಬೆಂಗಳೂರಿನಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧ ಎಂಟು ವಿಕೆಟ್‌ಗಳ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗೆ ಶುಭಾರಂಭ ಮಾಡಿದರು.
ಐಪಿಎಲ್ 16ನೇ ಆವೃತ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅವಿಸ್ಮರಣೀಯವಾಗಿ ಆರಂಭಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಆವೃತ್ತಿಯಲ್ಲಿ ತನ್ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡ ಭರ್ಜರಿ ಪ್ರದರ್ಶನ ನೀಡಿದ್ದು 8 ವಿಕೆಟ್‌ಗಳ ಅಂತರದ ಅಮೋಘ ಗೆಲುವು ಸಾಧಿಸಿದೆ
172 ರನ್‌ಗಳ ಬೆನ್ನಟ್ಟಿದ ಆರ್‌ಸಿಬಿಗೆ ಕೊಹ್ಲಿ ಮತ್ತು ಡು ಪ್ಲೆಸಿಸ್ ಪರಿಪೂರ್ಣ ಆರಂಭವನ್ನು ನೀಡಿದರು.
Advertisement. Scroll to continue reading.

ಮೊದಲಿಗೆ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನೀಡಿದ 172 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡದ ಪರವಾಗಿ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ ಜೋಡಿ ಭರ್ಜರಿ ಪ್ರದರ್ಶನ ನೀಡಿದರು.
In this article:Diksoochi news, diksoochi Tv, diksoochi udupi, Featured, IPL 2023, virat kohli

Click to comment