Connect with us

Hi, what are you looking for?

ಕರಾವಳಿ

ಪಡುಬಿದ್ರೆ: ಕಾರಿನಲ್ಲಿ ದಾಖಲೆ ಇಲ್ಲದ 4.79 ಲ. ರೂ. ಮೌಲ್ಯದ ಸಿಗರೇಟ್ ಪತ್ತೆ

1



ಪಡುಬಿದ್ರೆ : ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಯಾವುದೇ ದಾಖಲೆ ಇಲ್ಲದೆ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 4.79 ಲಕ್ಷ ರೂ.ಮೌಲ್ಯದ ಸಿಗರೇಟ್ ನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.

ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ಇದ್ದ ವಿಶೇಷ ತಂಡದ ಅಧಿಕಾರಿಗಳು ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾಪುವಿನ ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಂದ ಕಾರನ್ನು ತಡೆದು ಪರಿಶೀಲಿಸಿದಾಗ ಕಾರಿನಲ್ಲಿ ಯಾವುದೇ ದಾಖಲೆ ಇಲ್ಲದ 4,79,970 ರೂ. ಮೌಲ್ಯದ ಸಿಗರೇಟ್‌ನ ಬಂಡಲ್ ಗಳು ಪತ್ತೆಯಾಗಿದೆ.

ಈ ಬಗ್ಗೆ ಕಾರಿನ ಚಾಲಕ ಅಬ್ದುಲ್ ಖಾದರ್ ಅನ್ಸಾರ್ ಹಾಗೂ ಸುಫಿಯಾನ್‌ ಶೌರಿ ಬಳಿ ವಿಚಾರಿಸಿದಾಗ ಸಿಗರೇಟು ಬಂಡಲ್‌ಗಳನ್ನು ಮಂಜೇಶ್ವರ ಬಾಯಾರಿನ ಮೊಯ್ನು ಎಂಬಾತನು ಆರೋಪಿತರಿಗೆ ನೀಡಿ, ಅವುಗಳನ್ನು ಮಣಿಪಾಲದ ಸೈಫು ಎಂಬುವವನಿಗೆ ನೀಡುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಬಳಿಕ ಅಧಿಕಾರಿಗಳು ದಾಖಲೆ ಇಲ್ಲದ ಸಿಗರೇಟ್ ಗಳನ್ನು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...

ಕರಾವಳಿ

0 ಉಡುಪಿ : ಪ್ರತ್ಯೇಕ ಪ್ರಕರಣದಲ್ಲಿ ಆನ್‌ಲೈನ್ ಮೂಲಕ ಮೂವರಿಗೆ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಲಾಭಾಂಶದ ಆಮಿಷ; ವಂಚನೆ : ಸೆಪ್ಟೆಂಬರ್ 2 ರಂದು ರೇಣುಕಾ ಎಂಬವರಿಗೆ ಟೆಲಿಗ್ರಾಮ್ ಆಪ್‌ನಲ್ಲಿ ಅಪರಿಚಿತ...

ಕರಾವಳಿ

2 ಉಡುಪಿ : ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು...

ಅಂತಾರಾಷ್ಟ್ರೀಯ

1 ಒಟ್ಟಾವಾ : ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಟ್ರುಡೋ ಜನಪ್ರಿಯತೆ ಕುಸಿದಿರುವುದು ಸಮೀಕ್ಷೆಯಲ್ಲಿ ಕಂಡು...