ನವದೆಹಲಿ : ಕಳೆದ ಕೆಲವು ದಿನಗಳಿಂದ ಹಿಮಾಲಯದ ಮೇಲ್ಭಾಗದಲ್ಲಿ ಮಳೆ, ಹಿಮಪಾತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಋಷಿಕೇಶ ಮತ್ತು ಹರಿದ್ವಾರದಲ್ಲಿ ಕೇದಾರನಾಥ ಯಾತ್ರೆಗೆ ಯಾತ್ರಿಕರ ನೋಂದಣಿಯನ್ನು ಏ.30 ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಗರ್ವಾಲ್ ವಿಭಾಗದ ಹೆಚ್ಚುವರಿ ಕಮಿಷನರ್ (ಆಡಳಿತ) ಮತ್ತು ಚಾರ್ ಧಾಮ್ ಯಾತ್ರಾ ಆಡಳಿತ ಸಂಸ್ಥೆಯ ಹೆಚ್ಚುವರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರ ಸಿಂಗ್ ಕವಿರಿಯಾಲ್ ಸುದ್ದಿ ಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ.
ಕೆಟ್ಟ ಹವಾಮಾನ ಮತ್ತು ಭಾರೀ ಹಿಮಪಾತದ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಗೆ ಯಾತ್ರಾರ್ಥಿಗಳ ನೋಂದಣಿಯನ್ನು ಏ.30ರ ವರೆಗೆ ಸ್ಥಗಿತಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಹವಾಮಾನ ಪರಿಸ್ಥಿತಿಗಳನ್ನು ಪರಿಶೀಲಿಸಿದ ನಂತರ ಉತ್ತರಾಖಂಡ ಸರ್ಕಾರವು ಭಕ್ತರ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಏ.25 ರಂದು ಸಾರ್ವಜನಿಕರಿಗೆ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಗರ್ವಾಲ್ ಹಿಮಾಲಯದ ಮೇಲ್ಭಾಗದಲ್ಲಿ ನಿರಂತರ ಮಳೆ ಮತ್ತು ಹಿಮಪಾತದಿಂದಾಗಿ, ಈ ಪ್ರದೇಶದಲ್ಲಿ ಪಾದರಸವು ಗಮನಾರ್ಹವಾಗಿ ಕುಸಿದಿದೆ. ಫುಟ್‌ಪಾತ್‌ಗಳಲ್ಲಿ ಸಂಗ್ರಹಗೊಳ್ಳುವ ಹಿಮವನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ಭಕ್ತರು ಜಾಗರೂಕರಾಗಿರಿ ಎಂದು ಉತ್ತರಾಖಂಡ ಸರ್ಕಾರ ಸಲಹೆಯನ್ನು ನೀಡಿದೆ.
ಹವಾಮಾನದ ಕಾರಣದಿಂದಾಗಿ ಯಾತ್ರಾರ್ಥಿಗಳು ಯಾತ್ರೆಯ ಸಮಯದಲ್ಲಿ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಯಾತ್ರೆಯ ಎಲ್ಲಾ ಮಾರ್ಗಗಳಲ್ಲಿ ಸಾಕಷ್ಟು ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾತ್ರಾರ್ಥಿಗಳಿಗೆ ಸುಗಮ, ಸುರಕ್ಷಿತ ಮತ್ತು ಅಡೆತಡೆಯಿಲ್ಲದ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ. ವ್ಯವಸ್ಥೆಗಳನ್ನು ಉನ್ನತ ಮಟ್ಟದಲ್ಲಿ ನಿಯಮಿತವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

