ಸುಡಾನ್ ಕದನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ ‘ಆಪರೇಷನ್ ಕಾವೇರಿ’ ಆರಂಭಿಸಿದೆ ಎಂದು ಕೇಂದ್ರ ಸಚಿವ ಎಸ್. ಶಂಕರ್ ಮಾಹಿತಿ ನೀಡಿದ್ದಾರೆ.
ಕೇಂದ್ರ ಸಚಿವ ಎಸ್. ಶಂಕರ್ ರಕ್ಷಣಾ ಕಾರ್ಯಾಚರಣೆ ಮುಂದಾಲು ಸೂಚನೆ ನೀಡಲಾಗಿದೆ. ಅಲ್ಲದೇ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ನಮ್ಮ ದೇಶದ ಹಡಗುಗಳು ಹಾಗೂ ವಿಮಾನಗಳು ಸಜ್ಜಾಗಿವೆ. ಸುಮಾರು 500 ಭಾರತೀಯರು ಪೋರ್ಟ್ ಸುಡಾನ್ ತಲುಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಆಪರೇಷನ್ ಕಾವೇರಿ ಎಂದು ಹೆಸರಿಡಲಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಮಾಹಿತಿ ರವಾನಿಸಿದೆ.
ಸೇನೆ ಹಾಗೂ ಅರೆಸೇನಾ ಪಡೆಗಳ ನಡುವಿನ ಘರ್ಷಣೆಯಿಂದ ಸುಡಾನ್ ರಾಜಧಾನಿ ಸೇರಿದಂತೆ ದೇಶಾದ್ಯಂತ ಹಿಂಸಾಚಾರ ಭುಗಿಲೆದ್ದಿದೆ. ಮಿಲಿಟರಿ ಆಡಳಿತದ ವಿರುದ್ಧ ಅರೆಸೇನಾಪಡೆ ದಂಗೆ ಎದ್ದಿದ್ದು, ಖಾರ್ಟೂಮ್‌ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅಧ್ಯಕ್ಷರ ನಿವಾಸವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಈ ಹಿನ್ನೆಲೆ ಎರಡೂ ಕಡೆಗಳಿಂದ ಹಿಂಸಾಚಾರ ಭುಗಿಲೆದ್ದಿದೆ.
Advertisement. Scroll to continue reading.
