ವರದಿ : ದಿನೇಶ್ ರಾಯಪ್ಪನಮಠ
ಕೊಲ್ಲೂರು : ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ ಹೆಚ್ ಬಸವರಾಜೇಂದ್ರ ಅವರು ಭೇಟಿ ನೀಡಿದರು.
ದೇವಸ್ಥಾನದಲ್ಲಿ ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿದ ಅವರು ಬ್ರಹ್ಮಕಲಶಾಭಿಶೇಕದ ಪ್ರಾರಂಭದಿಂದಲೂ ಕೊನೆಯ ತನಕ ಅತ್ಯಂತ ಭಕ್ತಿಯಿಂದ ಎಲ್ಲಾ ಪೂಜಾ ವಿಧಿ ವಿಧಾನದಲ್ಲಿ ಪಾಲ್ಗೊಂಡರು.
ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವದ ನಿಮಿತ್ತ ಆಯೋಜಿಸಲಾದ ವ್ಯವಸ್ಥೆಯ ಕುರಿತಂತೆ ಮಾಹಿತಿ ಪಡೆದ ಆಯುಕ್ತರು ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯನ್ನ ವ್ಯಕ್ತ ಪಡಿಸಿದರು. ಜೊತೆಗೆ ಸಲಹೆ ಸೂಚನೆಯನ್ನ ನೀಡಿದರು.
ಈ ವೇಳೆ ದೇವಸ್ಥಾನದ ವತಿಯಿಂದ ಆಯುಕ್ತರಿಗೆ ದೇವರ ಪ್ರಸಾದ ನೀಡಿ ಗೌರವಿಸಲಾಯ್ತು.
ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ ಶೆಟ್ಟಿ, ಸರ್ವ ಸದಸ್ಯರೂ ಹಾಗೂ ಕಾರ್ಯನಿರ್ವಹಣಾಧಿಕಾರಿ ಎಸ್. ಸಿ. ಕೋಟಾರಗಸ್ತಿ ಉಪಸ್ಥಿತರಿದ್ದರು.
Advertisement. Scroll to continue reading.
